ನವದೆಹಲಿ: ಕೇಂದ್ರ ಸರ್ಕಾರ 2025-26ನೇ ಸಾಲಿನ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು (ಎಫ್ಆರ್ಪಿ) ಶೇ.4.41ರಷ್ಟು ಹೆಚ್ಚಿಸಿ ಕಬ್ಬು ಬೆಳೆಗಾರರಿಗೆ ಖುಷಿ ಸುದ್ದಿ ನೀಡಿದೆ. ಹೊಸ ದರದ ಪ್ರಕಾರ ಕ್ವಿಂಟಲ್ಗೆ 355 ರು. ದೊರೆಯಲಿದೆ. ಅಕ್ಟೋಬರ್ನಿಂದ ಜಾರಿಗೆ ಬರಲಿದೆ. ಕಬ್ಬು ಬೆಳೆಗಾರರ ಹಿತಾಸಕ್ತಿಯನ್ನು ಗಮನದ ಲ್ಲಿಟ್ಟುಕೊಂಡು ಪ್ರಧಾನಿ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿ ಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ ಕ್ವಿಂಟಲ್ಗೆ 340 ರು. ಇತ್ತು.