ಇಸ್ಲಾಮಾಬಾದ್: ಏ.22ರಂದು ಪಹಲ್ಲಾಮ್ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕರ ಉಗ್ರರ ದಾಳಿಯಲ್ಲಿ 26 ಜನರು ಪ್ರಾಣತೆತ್ತರು. ಇದೀಗ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ಪಾಕ್ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸೇಡು ತೀರಿಸಿಕೊಂಡಿದೆ.
ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ’ದಿಂದಾಗಿ ಪಾಕ್ ತತ್ತರಿಸಿ ಹೋಗಿದ್ದು, ಪಾಕಿಸ್ತಾನದಲ್ಲಿ ಸದ್ಯ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಭಾರತದ ವಾಯುದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ. ಹೀಗಾಗಿ ಪಾಕ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ.