ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಮೇ 29ಕ್ಕೆ ಶಾಲೆಗಳು ಆರಂಭವಾಗಲಿದೆ. ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಅಂದು ಶಾಲೆಗೆ ಹಾಜರಾಗಿ ಶಾಲೆಯ ಆರಂಭೋತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಕೆಲವು ಮಕ್ಕಳು ಶಾಲೆಗೆ ನಿರಂತರವಾಗಿ ಗೈರು ಹಾಜರಾಗುತ್ತಿರುವುದು ಮತ್ತು ಅರ್ಧದಲ್ಲಿಯೇ ಶಾಲೆ ಬಿಡುವ ಮಕ್ಕಳ ಬಗ್ಗೆ ಶಿಕ್ಷಕರು ಶಿಕ್ಷಣ ಸಂಯೋಜಕರ ಜತೆ ಸಂಪರ್ಕದಲ್ಲಿದ್ದು, ಅಂಥ ಮಕ್ಕಳನ್ನು ಶಾಲಾ ಮುಖ್ಯವಾಹಿನಿಗೆ ಕರೆತರಬೇಕು. ಕ್ರಿಸ್ಮಸ್ ಸಂದರ್ಭದಲ್ಲಿ ರಜೆ ನೀಡುವ ಉದ್ದೇಶ ಹೊಂದಿರುವ ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಬೇಕಿದ್ದು, ಅವರು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಕ್ರಿಸ್ಮಸ್ ಸಂದರ್ಭದಲ್ಲಿ ನೀಡುವ ರಜೆಯನ್ನು ಅಕ್ಟೋಬರ್ ತಿಂಗಳ ಮಧ್ಯಾಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.