ಕಾರವಾರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಳೇ ನಿಜಗಲ್ ಬಳಿ ವಾಹನ ಸವಾರರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಭದ್ರತಾ ಸಿಬ್ಬಂದಿ (ಗನ್ ಮ್ಯಾನ್) ಶ್ರೀಧರ ತೆಗ್ಗಿನ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಆದೇಶಿಸಿದ್ದಾರೆ.
‘ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಆಗಿರುವ ಶ್ರೀಧರ್ ವಿರುದ್ಧ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.