ಬಳ್ಳಾರಿ: ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಿಸಲಾಗಿದೆ.
ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಕಸಾಪದ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರು ಮಾತನಾಡಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.
ದೀಪ ಬಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದರು.
ಜೂ.29ರಂದು ಬಳ್ಳಾರಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.