ಬೆಳಗಾವಿ :
ಗಾಣಿಗ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವಂತೆ ಒತ್ತಾಯಿಸಿ ಡಿಸೆಂಬರ್ 29 ರಂದು ಮುಖ್ಯಮಂತ್ರಿ, ಸಚಿವರು, ಪ್ರತಿಪಕ್ಷ ನಾಯಕರಿಗೆ ಮನವಿ ಸಲ್ಲಿಸಲಾಗುತ್ತದೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ, ಸಚಿವರು, ಪ್ರತಿ ಪಕ್ಷದ ನಾಯಕರಿಗೆ ಭೇಟಿ ಮಾಡಿ ಗಾಣಿಗೆ ಸಮುದಾಯಕ್ಕೆ ಪ್ರತ್ಯೇಕ ನಿಗಮ ಮಂಡಳ ರಚನೆ ಮಾಡಲು ಮನವಿ ಸಲ್ಲಿಸಿ ಮನವರಿಕೆ ಮಾಡಲು ನಿರ್ಧರಿಸಲಾಗಿದೆ.
ಗಾಣಿಗ ಸಮಾಜದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಯಬಸವ ಕುಮಾರಸ್ವಾಮೀಜಿ ಅವರ ನೇತೃತ್ವದಲ್ಲಿ ಸ್ವಾಮೀಜಿಗಳು, ಗಾಣಿಗ ಸಮಾಜದ ರಾಜ್ಯಾಧ್ಯಕ್ಷ ಶೇಖರ ಸಜ್ಜನ, ಗುರಣ್ಣಗೋಡಿ ಮತ್ತು ಮಲ್ಲಿಕಾರ್ಜುನ ಲೋನಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರು, ತಾಲೂಕು ಅಧ್ಯಕ್ಷರು ಮತ್ತು ಮುಖಂಡರು ಸೇರಿ ಸಾವಿರಾರು ಜನ ಪಾಲ್ಗೊಳ್ಳುತ್ತಾರೆ ಎಂದು ಬೆಳಗಾವಿ ಜಿಲ್ಲಾ ಗಾಣಿಗ ನೌಕರರ ಹಾಗೂ ಸಾಂಸ್ಕೃತಿಕ ವೇದಿಕೆ ಪದಾಧಿಕಾರಿ ಶಿವರಾಯ ಏಳುಕೋಟಿ, ಜಿಲ್ಲಾ ಗಾಣಿಗ ಸಮಾಜದ ಅಧ್ಯಕ್ಷ ರಮೇಶ ಉಟಗಿ, ಉಲ್ಲಾಸ ಬಾಳೇಕುಂದ್ರಿ, ಮಾರುತಿ ಮೂಡಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.