ನವದೆಹಲಿ: ನಾಗರಿಕ ವಿಮಾನಯಾನ ಖಾತೆಯ ಮಾಜಿ
ಸಚಿವ ಪಶುಪತಿ ಅಶೋಕ್ ಗಜಪತಿ ರಾಜು ಅವರು ಗೋವಾದ ರಾಜ್ಯಪಾಲರಾಗಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ಕವಿಂದರ್ ಗುಪ್ತಾ ಅವರು ಲಡಾಖ್ಗೆ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.
ಪ್ರೊ. ಅಶೀಮ್ ಕುಮಾರ್ ಘೋಷ್ ಅವರು ಹರಿಯಾಣದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಇವರು ಅಧಿಕಾರ ಸ್ವೀಕರಿಸಿದ ದಿನದಿಂದ ಇವರ ಅಧಿಕಾರಾವಧಿ ಆರಂಭವಾಗಲಿದೆ.
ಕೇಂದ್ರಾಡಳಿತ ಪ್ರದೇಶ ಲಡಾಖ್ಖ್ನ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ನಿವೃತ್ತ ಬ್ರಿಗೇಡಿಯರ್ ಬಿ.ಡಿ. ಮಿಶ್ರಾ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಗುಪ್ತಾ ಅವರನ್ನು ನಿಯೋಜಿಸಿದ್ದಾರೆ. ಅದರಂತೆ ಗಜಪತಿ ರಾಜು ಮತ್ತು ಅಶೀಮ್ ಕುಮಾರ್ ಅವರ ನೇಮಕಾತಿಗೂ ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.