ಬೆಳಗಾವಿ : ಬೆಳಗಾವಿಯಲ್ಲಿ ಮಂಗಳವಾರ ಮಧ್ಯರಾತ್ರಿ ಮಹಿಳೆಯ ಭೀಕರ ಕೊಲೆ ನಡೆದಿದೆ.
ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಬೆಳಗಾವಿಯ ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ್ (45) ಎಂದು ಗುರುತಿಸಲಾಗಿದೆ. ಮಹಿಳೆಯ ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮೆಸ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮಹಾದೇವಿ ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ತಲೆಗೆ ರಾಡ್ ನಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಶವವನ್ನು ಪೊಲೀಸರು ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ಬಿಗಿ ಕಾವಲು ನಿಯೋಜಿಸಿದ್ದು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ. ಬೆಳಗಾವಿ ಎಪಿಎಂಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.