ಬೆಳಗಾವಿ: ಜಿಲ್ಲಾ 17 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಕನ್ನಡ ವಿದ್ವಾಂಸ, ವಿಮರ್ಶಕ ಡಾ.ವಿ.ಎಸ್.ಮಾಳಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಂಡಿದ್ದು, ಸಮ್ಮೇಳನವನ್ನು ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸಮ್ಮೇಳನವನ್ನು ಅರ್ಥಪೂರ್ಣವಾಗಿಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗುವುದೆಂದು ಮಂಗಲಾ ಮೆಟಗುಡ್ಡ ತಿಳಿಸಿದ್ದಾರೆ.