ಬೆಳಗಾವಿ : ಖಾನಾಪುರದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಯಿತು.
ಬಿಜೆಪಿ ತಾಲೂಕು ಅಧ್ಯಕ್ಷೆ ಸುನಿತಾ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಖಾನಾಪುರ ಪೊಲೀಸ್ ಠಾಣೆ ಮತ್ತು ಕೆಎಸ್ಆರ್ಟಿಸಿ ಬಸ್ ಡಿಪೋಗೆ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಗೆ ರಾಖಿ ಕಟ್ಟುವ ಮೂಲಕ ಅವರ ಸೇವೆಗೆ ಗೌರವ ಸಲ್ಲಿಸಲಾಯಿತು.
ಖಾನಾಪುರ ಶಾಸಕ ವಿಠ್ಠಲ್ ಹಲಗೇಕರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೊಚೇರಿ ಮತ್ತು ಇತರ ಸ್ಥಳೀಯ ಬಿಜೆಪಿ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪೊಲೀಸ್ ಮತ್ತು ಕೆಎಸ್ಆರ್ಟಿಸಿ ಸಿಬ್ಬಂದಿಯ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಸಲ್ಲಿಸಿ, ರಕ್ಷಾಬಂಧನ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.