ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸವಾಗಿದೆ. ಮಾರುಕಟ್ಟೆ ಪ್ರದೇಶದಲ್ಲಿ ಜನ ತೀರಾ ವಿರಳ ಸಂಖ್ಯೆಯಲ್ಲಿರುವುದು ಕಂಡುಬಂದಿದೆ. ಮಳೆಯ ಕಾರಣಕ್ಕೆ ಜಿಲ್ಲೆಯ ಕೆಲ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಬುಧವಾರ ಆಗಸ್ಟ್ 20 ರಂದು ಸಹಾ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆ, ಅಂಗನವಾಡಿಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದೆ.
ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ, ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರು : ಸತತ ಮೂರನೇ ದಿನವೂ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ…!!
