ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದು, ತನಿಖೆಯ ನಂತರ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ, ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.
ತನ್ನ ಭೇಟಿಗೆ ಬಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ತುಳುವಿನಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು ಎಸ್ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ತನಿಖೆಯ ಪ್ರಗತಿ ಕಂಡು ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಚಿನ್ನಯ್ಯ ಅವರನ್ನು ಎಸ್ಐಟಿ ಬಂಧಿಸಿದ ನಂತರ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮೌನ ಮುರಿದು, “ಸತ್ಯಗಳು ನಿಧಾನವಾಗಿ ಹೊರಬರುತ್ತಿವೆ, ಮತ್ತು ಅದು ಎಲ್ಲರಿಗೂ ಒಳ್ಳೆಯದಾಗಲಿ” ಎಂದು ಹೇಳಿದ್ದಾರೆ.