ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಮುಂದಿನ ಆರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 25ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 26ರಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಆಗಸ್ಟ್ 26ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ಆಗಸ್ಟ್ 30ರ ವರೆಗೆ ಭಾರೀ ಮಳೆಯ ಮುನ್ಸೂಚನೆ
