ಬೆಳಗಾವಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಂದ ಶಾಂತಿ ಮತ್ತು ಸಾಮರಸ್ಯದ ಸಂದೇಶದೊಂದಿಗೆ ಪರಿಸರ ಸ್ನೇಹಿ ಗಣೇಶನ ಪ್ರತಿಷ್ಠಾಪನೆ ನೆರವೇರಿತು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಚನ್ನಮ್ಮ ವೃತ್ತದ ಬಳಿ ಇರುವ ಗಣಪತಿ ಮಂದಿರದಲ್ಲಿ ಗಣೇಶನಿಗೆ ಪೂಜೆ ನೆರವೇರಿಸಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಲ್ಲರೂ ಶಾಂತಿ, ಸೌಹಾರ್ದತೆ ಹಾಗೂ ಭಾತೃತ್ವತೆಯಿಂದ ಬದುಕಬೇಕು. ಗಣೇಶ ದೇವರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿದರು.
ಜಿಲ್ಲಾಧಿಕಾರಿಯವರ ಕುಟುಂಬಸ್ಥರು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.