ಬೆಳಗಾವಿ: ಹುಬ್ಬಳ್ಳಿಯಿಂದ ಪುಣೆಗೆ ಬುಧವಾರದಂದು ಹೊರಟಿದ್ದ ಖಾಸಗಿ ಬಸ್ ಮಗುಚಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 9 ಗಾಯಗೊಂಡಿದ್ದಾರೆ.
ಬೆಳಗಾವಿ ತಾಲೂಕು ಹಿರೇಬಾಗೇವಾಡಿ ಬಳಿಯ ಬಡೆಕೊಳ್ಳಮಠದ ಘಾಟ್ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯಿಂದ ಪುಣೆಗೆ ತೆರಳುತ್ತಿದ್ದ ಈ ಗೋಗಟೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿದೆ. ಗಾಯಗೊಂಡ 9 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಸ್ಸಿನಲ್ಲಿ ಒಟ್ಟು 12 ಜನ ಪ್ರಯಾಣಿಕರು ಇದ್ದರು. ದುರ್ಘಟನೆಯಲ್ಲಿ ಮಹಿಳೆ ಮತ್ತು ಪುರುಷ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.