ಶಿವಮೊಗ್ಗ: ಭದ್ರಾವತಿಯಲ್ಲಿ ಸೋಮವಾರ ರಾತ್ರಿ
ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತದೆ.
ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.