ಬೆಳಗಾವಿ : ಖಾನಾಪುರ ತಾಲ್ಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಹತ್ತಿರ ಮಲಪ್ರಭಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಮತ್ತು ನದಿ ದಂಡೆಯಲ್ಲಿ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಯನ್ನು ರೂ.50.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.