ಬೆಂಗಳೂರು: ಇತ್ತೀಚೆಗೆ ಕೆಲ ಕಾರು ಮಾಲೀಕರು ತಮ್ಮ
ವಾಹನಗಳ ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರುಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.
ಕಾರು, ಬೈಕ್ ಅಥವಾ ಇತರ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಸಂಘ ಸಂಸ್ಥೆಗಳ ಹೆಸರು, ಲಾಂಛನ ಬರೆಸುವಂತಿಲ್ಲ. ಸರ್ಕಾರದ ಅಧಿಕೃತ ವಾಹನಗಳಲ್ಲಿ ಮಾತ್ರ ಹೆಸರು ಹಾಗೂ ಲಾಂಛನ ಬಳಸಬಹುದಾಗಿದೆ. ನಂಬರ್ ಪ್ಲೇಟ್ನಲ್ಲಿ ಹೆಸರು, ಲಾಂಛನ ಹಾಕಿ ನಿಯಮ ಉಲ್ಲಂಘಿಸಿದವರಿಗೆ ಮೊದಲ ಬಾರಿ 500 ರೂ. ದಂಡ ವಿಧಿಸಲಾಗುತ್ತದೆ. ಎರಡನೇ ಬಾರಿ ನಿಯಮ ಉಲ್ಲಂಘನೆಗೆ 1 ಸಾವಿರ ರೂ. ದಂಡ ವಿಧಿಸಲಾಗುತ್ತದೆ.