ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಅನುಮೋದನೆ
ಬೆಳಗಾವಿ: ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್.ನರೇಶ್ಕುಮಾರ್ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಳಗಾವಿಯ ಕೋಳಿಕೊಪ್ಪದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಈ ಮೂಲಕ ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ
ಎಂದು ತಿಳಿಸಿದರು.
16/09/2025 ರಂದು ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತುತವಾಗಿ ಚರ್ಚಿಸಲಾಯಿತು.
ಬೆಂಗಳೂರು ಹಾಗೂ ದೇಶದ ಇತರೆ ಭಾಗಗಳಲ್ಲಿ ಇರುವಂತೆ ಬೆಳಗಾವಿಯಲ್ಲೂ ದೇವಸ್ಥಾನ ನಿರ್ಮಿಸುವುದರಿಂದ ಆಭಾಗದ ಭಕ್ತಾದಿಗಳಿಗೆ ಅನುಕೂಲವಾಗಲಿದೆ. ಪ್ರತಿ
ಬಾರಿಯೂ ತಿರುಪತಿ-ತಿರುಮಲಕ್ಕೆ ಭೇಟಿ ನೀಡುವ ಬದಲಾಗಿ, ಸ್ಥಳೀಯವಾಗಿಯೇ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಭಾಗ್ಯ ಲಭಿಸಲಿದೆ. ಬೆಳಗಾವಿ ಸುವರ್ಣಸೌಧದ ಹತ್ತಿರ ಈ ದೇವಸ್ಥಾನ ನಿರ್ಮಾಣವಾಗಲಿದೆ. ಶ್ರೀವಾಣಿ ಟ್ರಸ್ಟ್ ಮುಖಾಂತರ ಈ ದೇವಸ್ಥಾನ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಟಿಟಿಡಿ ಅಧ್ಯಕ್ಷ ಬಿ ಆರ್ ನಾಯ್ಡು ಅವರು ಬೆಳಗಾವಿಗೆ ಭೇಟಿ ನೀಡಿ ಮುಂದಿನ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ ಎಂದರು.
ಸಾಲಕಟ್ಲ ಬ್ರಹೋತ್ಸವ: ತಿರುಮಲದ
ಪಾವಿತ್ರ್ಯತೆಯನ್ನು ಕಾಪಾಡುವುದು ಮತ್ತು ಸಾಮಾನ್ಯ ಭಕ್ತರಿಗೆ ಸುಲಭ ದರ್ಶನ ಒದಗಿಸುವುದು ಆಂಧ್ರಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಮುಖ್ಯ ಆದ್ಯತೆಯಾಗಿದೆ. ಬ್ರಹ್ಮತ್ಸವದ ಸಮಯದಲ್ಲಿ ಈ ನಿಟ್ಟಿನಲ್ಲಿ ನಾವು ವಿಶೇಷ ಗಮನ ಹರಿಸುತ್ತಿದ್ದೇವೆ. ಈ ವರ್ಷದ ವಾರ್ಷಿಕ ಸಾಲಕಟ್ಲ ಬ್ರಹೋತ್ಸವವು ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 2, 2025 ರವರೆಗೆ ನಡೆಯಲಿದೆ ಎಂದರು.
ಸೆಪ್ಟೆಂಬರ್ 24ರಿಂದ ಅಕ್ಟೋಬರ್ 2ರವರೆಗೆ ತಿರುಮಲ ವಾರ್ಷಿಕ ಬ್ರಹ್ಮೋತ್ಸವ ನಡೆಯಲಿದ್ದು, ಸಕಲ ಸಿದ್ಧತೆ ನಡೆಯುತ್ತಿದೆ. ಕಳೆದ ಬಾರಿ ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಹೀಗಾಗಿ ಈ ಬಾರಿ ಎಚ್ಚರ ವಹಿಸಲು ಸೂಚಿಸಲಾಗಿದೆ. ಬ್ರಹ್ಮೋತ್ಸವದ ಸಮಯದಲ್ಲಿ ವಿಶೇಷ ಗಮನಹರಿಸಲಿದ್ದು, ತಿರುಮಲದ ಪಾವಿತ್ರ್ಯತೆಯನ್ನು ಕಾಪಾಡುವುದು ಮತ್ತು ಸಾಮಾನ್ಯ ಭಕ್ತರಿಗೆ ಸುಲಭ ದರ್ಶನ ಸಿಗುವಂತೆ ಅವಕಾಶ ಮಾಡಿಕೊಡುತ್ತೇವೆ ಎಂದಿದ್ದಾರೆ.