ದುಬೈ: ಏಷ್ಯಾ ಕಪ್ ಟಿ 20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಇಂದು ರಾತ್ರಿ ಭಾರತ ಮತ್ತೊಮ್ಮೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
ಕಳೆದ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಏಳು ವಿಕೆಟ್ಗಳ ಭರ್ಜರಿ ಅಂತರದಿಂದ ಸೋಲಿಸಿತ್ತು. ಭಾರತ ಆಟಗಾರರು ಪಾಕಿಸ್ತಾನ ಆಟಗಾರರಿಗೆ ಹಸ್ತಲಾಘವ ನೀಡದೆ ಸುದ್ದಿಯಾಗಿದ್ದರು. ಇಂದು ನಡೆಯುವ ಪಂದ್ಯದ ಸಂದರ್ಭದಲ್ಲೂ ಪಾಕಿಸ್ತಾನ ಆಟಗಾರರಿಗೆ ಹಸ್ತಲಾಘವ ನೀಡದೆ ಇರುವ ತನ್ನ ನಿಲುವನ್ನು ಮುಂದುವರಿಸಿಕೊಂಡು ಹೋಗುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದ ಈ ಪಂದ್ಯ ಮೇಲೆ ಎಕ್ಲರ ಚಿತ್ತ ಹರಿದಿದೆ.
ಭಾರತ ತಂಡ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ತನ್ನ ಗೆಲುವಿನ ಓಟ ಮುಂದುವರಿಸುವ ಅಚಲ ವಿಶ್ವಾಸದಲ್ಲಿದೆ. ಭಾರತ ಎಲ್ಲಾ ಪಂದ್ಯಗಳನ್ನು ಗೆದ್ದಿದೆ. ಒಟ್ಟಾರೆ ಇಂದು ನಡೆಯುವ ಪಂದ್ಯ ಅತ್ಯಂತ ರೋಮಾಂಚಕವಾಗಲಿದ್ದು ಭಾರತ ತನ್ನ ಅಜೇಯ ಸಾಧನೆ ಮುಂದುವರಿಸುವ ಎಲ್ಲಾ ಸಾಧ್ಯತೆ ಹೆಚ್ಚಾಗಿದೆ.