ಬೆಳಗಾವಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಹಾಸ್ಟೆಲ್ ನಲ್ಲಿಯೇ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ನಗರದ ಸದಾಶಿವನಗರದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಸುಮಿತ್ರಾ ಗೋಕಾಕ್ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಬೆಳಿಗ್ಗೆ ಸಹಪಾಠಿಗಳು ಕೊಠಡಿಗೆ ಬಂದು ಬಾಗಿಲು ಬಡಿದರೂ ಸುಮಿತ್ರಾ ಬಾಗಿಲು ತೆರೆದಿಲ್ಲ. ಪರಿಶಿಲನೆ ನಡೆಸಿದಾಗ ಕೊಠಡಿಯಲ್ಲಿ ಸುಮಿತ್ರಾ ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.
ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.