ಬೆಳಗಾವಿ: ಕಾಗವಾಡ ತಾಲೂಕು ಐನಾಪುರದಲ್ಲಿ ಸೋಮವಾರ ರಾತ್ರಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಕಾಗವಾಡದಲ್ಲಿ ಎರಡು ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡುವ ಎಸ್ ಪಿ ಭೀಮಶಂಕರ ಗುಳೇದ ಅವರು, ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿ ಹಿಂಸೆ ಕಾಯ್ದೆ ಅಡಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಲಾರಿಗೆ ಬೆಂಕಿ ಹಚ್ಚಿದ್ದು ದರೋಡೆ ಮತ್ತು ಅಟ್ರಾಸಿಟಿ ಪ್ರಕರಣದಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ತನಿಖೆ ತೀವ್ರಗೊಳಿಸಲಾಗಿದ್ದು ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಯಬಾಗ ತಾಲೂಕು ಕುಡಚಿಯಿಂದ ಹೈದರಾಬಾದ್ ಗೆ ಲಾರಿಯಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದಾಗ ಐನಾಪುರದಲ್ಲಿ ಸೋಮವಾರ ರಾತ್ರಿ ನಾಗರಿಕರು ಲಾರಿ ತಡೆದು ಬೆಂಕಿ ಹಚ್ಚಿದ್ದರು.