ಬೆಳಗಾವಿ: ಇಲ್ಲಿಯ ಬೆಳಗಾವಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (TAPCMS) ದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಗಜಾನನ ಕಾಗಣೀಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದಿಲ್ಲಿ ಸಂಘದ ಕಚೇರಿಯಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಡಿಆರ್ಸಿಎಸ್ ಕಚೇರಿಯ ಹಿರಿಯ ನಿರೀಕ್ಷಿಕ ಗೋವಿಂದಗೌಡ ಪಾಟೀಲ ಅವರು
ಪ್ರಕಟಿಸಿದರು. ವ್ಯವಸ್ಥಾಪಕ ಮಲಗೌಡ ದೊಡ್ಡಗೌಡರ ಹಾಜರಿದ್ದರು.
ಸೆ. 23 ರಂದು ಸಹಕಾರ ಸಂಘದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯು ನಿಗದಿಯಾಗಿದ್ದರಿಂದ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿಯವರ ನೇತೃತ್ವದಲ್ಲಿ ಸಂಘದ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಚಿವರ ಸೂಚನೆಯಂತೆ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲು ತೀರ್ಮಾನಕ್ಕೆ ಬರಲಾಯಿತು.
ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಪಾಟೀಲ, ಮಾಜಿ ಶಾಸಕ ಅರವಿಂದ ಪಾಟೀಲ, ಸಂಘದ ಆಡಳಿತ ಮಂಡಳಿಯ ಸದಸ್ಯರಾದ ಕಲ್ಲಪ್ಪ ಪಾಟೀಲ, ಬಸನಗೌಡ ಪಾಟೀಲ, ಭೀಮಪ್ಪ ಮಳಗಲಿ, ಮಹಾಂತೇಶ ಅಲಾಬದಿ, ಮಹಾಂತೇಶ ಉಳ್ಳೆಗಡ್ಡಿ, ರಮೇಶ ಕಾಳೋಜಿ, ಸುರೇಶ ಸಾವಂತ್, ಲಕ್ಷ್ಮೀ ಸೋನಾಜಿ, ಸಾವಿತ್ರಿ ಪಾಟೀಲ, ಆಸಿಫ್ ಮುಲ್ಲಾ, ಪ್ರದೀಪ ದೇಸಾಯಿ, ಚೇತನ ಕಾಂಬಳೆ, ಸುಕ್ಕಪ್ಪ ಪಕಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ ಆಯ್ಕೆ
