ದುಬೈ : ನಿರ್ಣಾಯಕ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 11 ರನ್ಗಳ ಸೋಲುಣಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಇದೇ ಮೊದಲಬಾರಿಗೆ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
1984ರಲ್ಲಿ ಏಷ್ಯಾ ಕಪ್ ಪ್ರಾರಂಭವಾದ ಬಳಿಕ ಈವರೆಗೆ ಒಟ್ಟು 16 ಬಾರಿ ಉಭಯ ತಂಡಗಳ ನಡುವೆ ಪಂದ್ಯಾವಳಿ ಜರುಗಿದೆ. ಆದ್ರೆ ಈವರೆಗೂ ಕ್ರಿಕೆಟ್ನ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ಫೈನಲ್ ತಲುಪಿದ್ದಿಲ್ಲ. ಇದೀಗ ಭಾನುವಾರದಂದು ನಡೆಯಲಿರುವ ಪಂದ್ಯ ಹೈವೋಲ್ಟೇಜ್ ಪಂದ್ಯವಾಗಲಿದೆ.
ಬಾಂಗ್ಲಾದೇಶ ತಂಡದ ಬ್ಯಾಟರ್ ಗಳನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಹಿನ್ ಶಾ ಅಫ್ರಿದಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಕೂಡ ಪಾತ್ರರಾದರು.
ಏಷ್ಯಾ ಕಪ್ ಟಿ20 ಕ್ರಿಕೆಟ್ ಕೂಟ ದ ಗುರುವಾರ ನಡೆದ ನಿರ್ಣಾಯಕ ಸೂಪರ್ ಫೋರ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಪಾಕಿಸ್ಥಾನ 11 ರನ್ಗಳಿಂದ ಜಯ ಸಾಧಿಸಿ ಫೈನಲ್ ಪ್ರವೇಶಿಸಿ ಭಾರತದ ಎದುರು ಇನ್ನೊಂದು ಹಣಾಹಣಿಗೆ ವೇದಿಕೆ ಸಿದ್ದ ಮಾಡಿಕೊಂಡಿದೆ. ಸೆಪ್ಟೆಂಬರ್ 28 ರಂದು (ರವಿವಾರ) ಏಷ್ಯಾ ಕಪ್ ಫೈನಲ್ ರೋಚಕ ಹಣಾಹಣಿಗೆ ಸಾಕ್ಷಿಯಾಗಲಿದೆ.
ಅಮೋಘ ಬೌಲಿಂಗ್ ದಾಳಿ ಸಂಘಟಿಸಿದ ಬಾಂಗ್ಲಾ ಬೌಲರ್ಗಳು ನಡೆದ ಪಾಕಿಸ್ಥಾನವನ್ನು 8 ವಿಕೆಟಿಗೆ 135 ರನ್ನಿಗೆ ನಿಯಂತ್ರಿಸಲು ಯಶಸ್ವಿಯಾದರು. ಸಾಧಾರಣ ಮೊತ್ತ ಕಂಡು ಫೈನಲಿಗೇರಲು ಸಜ್ಜಾಗಿದ್ದ ಬಾಂಗ್ಲಾಕ್ಕೆ ಪಾಕಿಸ್ಥಾನ ಬೌಲರ್ ಗಳು ಘಾತಕವಾಗಿ ಪರಿಣಮಿಸಿದರು.9 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಲಷ್ಟೇ ಶಕ್ತವಾಯಿತು.
ಪಾಕಿಸ್ಥಾನ ಪರ ಬಿಗಿ ದಾಳಿ ನಡೆಸಿದ ಶಾಹೀನ್ ಅಫ್ರಿದಿ ಮತ್ತು ಹಾರಿಸ್ ರೌಫ್ 3 ವಿಕೆಟ್ ಕಿತ್ತರು. ಸೈಮ್ ಅಯೂಬ್ 2 ವಿಕೆಟ್ ಕಿತ್ತು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಪಾಕಿಸ್ಥಾನವು ಆರಂಭದಲ್ಲಿಯೇ ಕುಸಿತ ಕಂಡಿತು. 5 ರನ್ನಿಗೆ 2 ವಿಕೆಟ್ ಕಳೆದುಕೊಂಡ ಪಾಕಿಸ್ಥಾನ 71 ರನ್ ತಲಪುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡು ಒದ್ದಾಡುತ್ತಿತ್ತು. ಈ ಹಂತದಲ್ಲಿ ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ನವಾಜ್ ಮತ್ತು ಶಾಹೀನ್ ಶಾ ಅಫ್ರಿದಿ ಅವರ ಉಪಯುಕ್ತ ಆಟದಿಂದಾಗಿ ಪಾಕಿಸ್ಥಾನದ ಮೊತ್ತ ನೂರರ ಗಡಿ ದಾಟುವಂತಾಯಿತು. ಹ್ಯಾರಿಸ್ 31 ಮತ್ತು ನವಾಜ್ 29 ರನ್ ಹೊಡೆದರು.
ಬಿಗು ದಾಳಿ ಸಂಘಟಿಸಿದ ಬಾಂಗ್ಲಾ ಈ ಪಂದ್ಯದಲ್ಲಿ ಮೇಲುಗೈ ಸಾಧಿಸಿ ಗಮನ ಸೆಳೆಯಿತು. ಟಸ್ಕಿನ್ ಅಹ್ಮದ್ 28 ರನ್ನಿಗೆ ಮೂರು ವಿಕೆಟ್ ಕಿತ್ತರೆ ಮೆಹದಿ ಹಸನ್ ಮತ್ತು ರಿಶದ್ ಹೊಸೈನ್ ತಲಾ ಎರಡು ವಿಕೆಟ್ ಪಡೆದರು.