ಖಾನಾಪುರ: ಎಂ.ಕೆ. ಹುಬ್ಬಳ್ಳಿ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆಯಲ್ಲಿ ಪುನರುಜ್ಜೀವನ ರೈತ ಸಮಿತಿ ಭಾರಿ ಬಹುಮತದಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ಸಕ್ಕರೆ ಕಾರ್ಖಾನೆ ಎಂಡಿ ಹಿರೇಮಠ ಅವರೊಂದಿಗೆ ಕಾರ್ಖಾನೆಯ ಬೆಳವಣಿಗೆ ನಿಟ್ಟಿನಲ್ಲಿ ಮಹತ್ವದ ಸಭೆ ನಡೆಸಿ ಚರ್ಚಿಸಿದರು.
ಬಿಜೆಪಿ ಖಾನಾಪುರ ತಾಲೂಕು ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಮಾರಿಹಾಳ, ರಾಜು ಸಿದ್ಧಾನಿ, ಶ್ರೀಕಾಂತ ಪಾಟೀಲ, ಚಂದ್ರಗೌಡ ಪಾಟೀಲ, ರಾಜು ಕರಂಬಾಳ್ಕರ ಮತ್ತಿತರರು ಉಪಸ್ಥಿತರಿದ್ದರು.