ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಲ್ಲಿಕಾರ್ಜುನ್ ಖರ್ಗೆ ಅಸ್ವಸ್ಥರಾಗಿದ್ದು, ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.