ಬೆಳಗಾವಿ: ಜಾತ್ರೆ ಅಚರಣೆ ವೇಳೆ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರೊಬ್ಬರು ಡಬಲ್ ಬ್ಯಾರಲ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಬೆಳಗಾವಿ ತಾಲೂಕಿನ ಬಸವನಕುಡಚಿ ಕಲ್ಮೇಶ್ವರ ಜಾತ್ರೆಯಲ್ಲಿ ನಡೆದಿದೆ.
ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾಯವ್ವಗೋಳ ಎಂಬುವವರು ಬಸವನಕುಡಚಿ ಕಲ್ಷೇಶ್ವರ ಜಾತ್ರೆಯಲ್ಲಿ ಡಬಲ್ ಬ್ಯಾರಲ್ ಗನ್ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದು ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.