ಬೆಂಗಳೂರು: ಅವಧಿಯೊಳಗೆ ಜಾತಿ ಗಣತಿ ಮುಗಿಯದ ಕಾರಣ ಅದರ ಅವಧಿ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಸಮೀಕ್ಷೆಯ ಅವಧಿಯನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 24ರವರೆಗೆ ವಿಸ್ತರಿಸಲಾಗಿದ್ದು, ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿಅಕ್ಟೋಬರ್ 12ರವರೆಗೆ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್ 8 ರಿಂದ ಶಾಲಾ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ.
ಕಳೆದ ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಆರಂಭವಾಗಿದ್ದು,. ಈ ಗಣತಿಗೆ ರಾಜ್ಯ ಸರ್ಕಾರ ಅಕ್ಟೋಬರ್ 7ರಂದು ಡೆಡ್ಲೈನ್ ನೀಡಿತ್ತು. ಆದರೆ ಸರ್ಕಾರಕ್ಕೆ ಕೊಟ್ಟ ಗಡುವಿನೊಳಗೆ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 8 ರಿಂದ ಶಾಲಾ ತರಗತಿ ಸಮಯವನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆಸಲು ಸೂಚಿಸಲಾಗಿದ್ದು, ನಂತರ ಶಿಕ್ಷಕರು ಸಮೀಕ್ಷೆಗೆ ಹೋಗಬೇಕಾಗಿದೆ.
ಸೆಪ್ಟೆಂಬರ್ 22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಂಡಿತ್ತು. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ 15 ದಿನಗಳ ಕಾಲ ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದರು. ಆದರೆ ಸಮೀಕ್ಷೆ ಪೂರ್ಣಗೊಂಡಿಲ್ಲ.