ಬೆಳಗಾವಿ : ರಾಮದುರ್ಗ ಕಾಂಗ್ರೆಸ್ ಶಾಸಕ ಅಶೋಕ ಪಟ್ಟಣ ಅವರು ತಾವು ಸಚಿವರಾಗುವ ಆದಮ್ಯ ಆಸೆಯನ್ನು ಹೊರಹಾಕಿದ್ದಾರೆ.
ರಾಮದುರ್ಗ ಕ್ಷೇತ್ರದಿಂದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆದ ನಂತರ ಅವರು ಪತ್ರಕರ್ತರ ಜೊತೆ ಮಾತನಾಡಿದರು. ಇಲ್ಲಿ ನಾನು ಸೋತರೆ ಮುಂದೆ ಸಂಪುಟ ಸೇರುವ ಬಗ್ಗೆ ತೊಂದರೆ ಆಗಬಹುದು. ಆದ್ದರಿಂದ ನಾನು ನಾಮಪತ್ರವನ್ನು ಹಿಂಪಡೆಯುತ್ತಿದ್ದೇನೆ. ನಾನು ಸಚಿವ ಸ್ಥಾನದ ಆಕಾಂಕ್ಷಿ. ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗಬಹುದು. ಆದ್ದರಿಂದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಪಾಯ ಎದುರಿಸಲು ಬಯಸಿಲ್ಲ. ನಾಮಪತ್ರ ಹಿಂಪಡೆದಿರುವ ನಿರ್ಧಾರ ನನ್ನ ವೈಯಕ್ತಿಕ. ಯಾರ ಒತ್ತಡಕ್ಕೂ ಮಣಿದಿಲ್ಲ. ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದರೂ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಶೋಕ ಪಟ್ಟಣ ಅವರು ತಿಳಿಸಿದರು