ಬೆಳಗಾವಿ: ರಾಜ್ಯದ ಗಮನಸೆಳೆದಿರುವಅತ್ಯಂತ ಪ್ರತಿಷ್ಠೆಯ ಚುನಾವಣೆ ಆಗಿರುವ ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕು ಚುನಾವಣೆ ಮುಂದೂಡಿದ್ದರಿಂದ ಮಾಜಿ ಸಂಸದ ರಮೇಶ ಕತ್ತಿ ಹಾಗೂ ಜಾರಕಿಹೊಳಿ ಬಣಕ್ಕೆ ಶಾಕ್ ನೀಡಿದಂತಾಗಿದೆ.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಹುಕ್ಕೇರಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅ. 19 ರಂದು ನಡೆಯಬೇಕಿದ್ದ ಚುನಾವಣೆಯನ್ನು ಹೈಕೋರ್ಟ್ ಮುಂದೂಡುವ ಮೂಲಕ ಮಧ್ಯಂತರ ತೀರ್ಪು ನೀಡಿದೆ.
ಭೀಮಸೇನ ಬಾಗಿ ಎಂಬವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದೆ.
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಅ. 19ರಂದು ನಡೆಯಬೇಕಿದ್ದ ಆಡಳಿತ ಮಂಡಳಿ ಸಾಮಾನ್ಯ ಚುನಾವಣೆಗೆ ಸಂಬಂಧಿಸಿ ಹುಕ್ಕೇರಿ ತಾಲೂಕಿನ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳಿಂದ(ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ) ಪ್ರತಿನಿಧಿಸುವ ಮತಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. ಹೈಕೋರ್ಟ್ ನ ಮುಂದಿನ ಆದೇಶ ಆಗುವವರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.