ಬೆಳಗಾವಿ: ನಗರದ ಕೆ ಎಲ್ ಇ ಸಂಸ್ಥೆಯ (ಜಕ್ಕೇರಿ ಹೊಂಡ ) ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿಎ ಮತ್ತು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ .
ಮಹಾವಿದ್ಯಾಲಯದ
2017 ರಿಂದ 2020 ರ ಸಾಲಿನ ವಿದ್ಯಾರ್ಥಿನಿ ನೇಹಾ ಅಲ್ತೆಕರ್ ಮತ್ತು 2019ರಿಂದ 2022 ಸಾಲಿನ ವಿದ್ಯಾರ್ಥಿನಿ ರಶ್ಮಿ ಹೆಗಡೆ ಸಿಎ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.
2024-2025 ಸಾಲಿನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿ ಶಿವತೇಜ ಸಾವಂತ ಮತ್ತು ಬಿಕಾಂ ಎರಡನೇ ವರ್ಷದ ವಿದ್ಯಾರ್ಥಿನಿ ಅಂಶಿಕಾ ಮಲ್ಲಾಪುರ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಸಿ ಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಮತ್ತು ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು
ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮತ್ತು ಸರ್ವ ಸದಸ್ಯರು ,ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹಾಂತೇಶ ಕವಟಗಿಮಠ ಮತ್ತು ಸರ್ವ ಸದಸ್ಯರು ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯರು, ಮತ್ತು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಸಿಎ ಮತ್ತು ಸಿಎಂ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ


