
ಬೆಳಗಾವಿ : ಕೆ ಎಲ್ ಇ ಸಂಸ್ಥೆಯ ಜಿಎ ಪ್ರೌಢಶಾಲೆಯಲ್ಲಿ ಶನಿವಾರ ಭಕ್ತ ಕನಕದಾಸರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಚಾರ್ಯ ಧನಾಜಿ ಪವಾರ್ ಮತ್ತು ಉಪ ಪ್ರಾಚಾರ್ಯ ಸಿ.ಪಿ.ದೇವರುಷಿ ಅವರು ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಜಿ.ಎ.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪವಾರ ಮಾತನಾಡಿ, ಭಕ್ತ ಕನಕದಾಸರ ಚಿಂತನೆಗಳು ಮನುಕುಲಕ್ಕೆ ಆದರ್ಶಪ್ರಾಯವಾಗಿದೆ ಎಂದು ಹೇಳಿದರು.
ಕೆಎಲ್ ಇ ಸಂಸ್ಥೆಯ ಆಜೀವ ಸದಸ್ಯ ಮಹಾದೇವ ಬಳಿಗಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಿಎ ಪ್ರೌಢಶಾಲೆಯಲ್ಲಿ ಭಕ್ತ ಕನಕದಾಸರ ಜನ್ಮ ದಿನಾಚರಣೆ


