ಬೆಳಗಾವಿ : ಭಾರಿ ಕುತೂಹಲ ಕೆರಳಿಸಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹುದ್ದೆಯ ಚುನಾವಣೆ ಕೊನೆಗೂ ತಾರ್ಕಿಕ ಅಂತ್ಯ ಕಂಡಿದೆ. ಅಧ್ಯಕ್ಷ ಹುದ್ದೆಗೆ ಅಣ್ಣಾ ಸಾಹೇಬ ಜೊಲ್ಲೆ ಮತ್ತು ಉಪಾಧ್ಯಕ್ಷ ಹುದ್ದೆಗೆ ರಾಜು ಕಾಗೆ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಚಿಕ್ಕೋಡಿಯ ಮಾಜಿ ಸಂಸದ ಹಾಗೂ ಬಿಜೆಪಿ ಧುರೀಣ ಅಣ್ಣಾ ಸಾಹೇಬ್ ಜೊಲ್ಲೆ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜಾರಕಿಹೊಳಿ ಸಹೋದರರ ಬೆಂಬಲಿಗರಾಗಿ ಅವರು ಗುರುತಿಸಿ ಕೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದಾರೆ.
BREAKING ಡಿಸಿಸಿ ಬ್ಯಾಂಕ್ ಚುನಾವಣೆ : ಈ ಸಲ ಅಚ್ಚರಿ ಆಯ್ಕೆ…!


