
ಖಾನಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ಲಿ., ಖಾನಾಪುರ ತಾಲೂಕು, ಬೆಳಗಾವಿ ಜಿಲ್ಲೆ,ಬಿಜಗರ್ಣಿ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ನಂದಗಡ ವಲಯ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಂಯುಕ್ತ ಆಶ್ರಯದಲ್ಲಿ ಪರಮ ಪೂಜ್ಯ ಪದ್ಮಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ ಅವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ತಾಲೂಕಿನ ಅನೇಕ ಗಣ್ಯರು, ಪಂಚಾಯತ್ ಸದಸ್ಯರು, ಪ್ರಗತಿ ಬಂಧು ಸಂಘದ ಸದಸ್ಯರು ಹಾಗೂ ಭಕ್ತವೃಂದರು ಉಪಸ್ಥಿತರಿದ್ದರು.


