ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಭರ್ಜರಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಗುರುವಾರ ಮಧ್ಯಾಹ್ನ 1:30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಕೇಂದ್ರ ಸಚಿವರು, ಎನ್ ಡಿ ಎ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವರು. ನಿತೀಶ್ ಕುಮಾರ್ ಅವರು ಹತ್ತನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದು ವಿಶೇಷವಾಗಿದೆ.


