ಬೆಳಗಾವಿ: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯಗಳ ತಡೆ ಕಾಯ್ದೆ ಪ್ರಕಾರ 10 ಅಥವಾ 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿರುವ ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡಬೇಕಾಗುತ್ತದೆ.
ಹಲವಾರು ಕಚೇರಿ/ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆಗೊಂಡಿರುವುದಿಲ್ಲ ಹಾಗೂ ಸಮಿತಿಯನ್ನು ಪೋರ್ಟಲ್ ನಲ್ಲಿ ಅಪಡೇಟ್ ಮಾಡಲ್ಪಟ್ಟಿರುವುದಿಲ್ಲ. ಆದ್ದರಿಂದ ಒಂದು ವಾರದೊಳಗಾಗಿ ಸಮಿತಿ ರಚಿಸಲು ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಸಮಿತಿ ರಚನೆ ಮಾಡದೇ ಇದ್ದ ಪಕ್ಷದಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕ ಮತ್ತು ನಿವಾರಿಸುವಿಕೆ) ಕಾಯ್ದೆಯಂತೆ ರೂ.50,000 ಗಳ ದಂಡವನ್ನು ವಿಧಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಮೂಲಕ ಅಥವಾ ಶಿವಾಜಿ ನಗರ ಮೂರನೇ ಕ್ರಾಸ್, ಬೆಳಗಾವಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


