ಬೆಳಗಾವಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷರು (ಸ್ಕೌಟ್ಸ್ ) ಹಾಗೂ ಬೆಳಗಾವಿ ಜಿಲ್ಲಾ ಮುಖ್ಯ ಆಯುಕ್ತ ಗಜಾನನ ಬಸಲಿಂಗಪ್ಪ ಮನ್ನಿಕೇರಿ ಯವರು ಸ್ಕೌಟ್ಸ್ ಸಂಸ್ಥೆಯಲ್ಲಿ ಸಕ್ರಿಯವಾಗಿ 40 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅಲಂಕರಿಸಿ ರಾಷ್ಟ್ರ ರಾಜ್ಯ ಮತ್ತು ಜಿಲ್ಲಾಮಟ್ಟದ ಕಾರ್ಯಕ್ರಮಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಸಂಸ್ಥೆಯವರು ರಾಷ್ಟ್ರಮಟ್ಟದ. ” ಬಾರ್ ಟು ಸಿಲ್ವರ್ ಸ್ಟಾರ್” ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ 75 ನೆಯ ರಾಷ್ಟ್ರೀಯ ಜಾಂಬೂರಿಯಲ್ಲಿ 26 ರಂದು ಬುಧವಾರರಂದು ಲಕ್ನೋದ ರಾಜ್ಯ ಭವನದಲ್ಲಿ ರಾಜ್ಯಪಾಲ ಆನಂದಿ ಬೆನ್ ಪಟೇಲ್ ರವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಈ ವೇಳೆ ಗಜಾನನ ಮನ್ನಿಕೇರಿ ಅವರನ್ನು ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿನಂದಿಸಿದ್ದಾರೆ.


