ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಿಸನಳ್ಳಿಯ ಜಗದ್ಗುರು ಪಂಚಾಚಾರ್ಯ ವೇದ, ಆಗಮ, ಸಂಸ್ಕೃತ, ಸಂಗೀತ, ಯೋಗ ಮತ್ತು ಜ್ಯೋತಿಷ್ಯ ಪಾಠ ಶಾಲೆ ವತಿಯಿಂದ ಕೊಡಮಾಡುವ ಮಾಧ್ಯಮ ಭೂಷಣ ಪ್ರಶಸ್ತಿಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಬೆಳಗಾವಿ ಜಿಲ್ಲಾ ವರದಿಗಾರ ಅನಿಲ್ ಕಾಜಗಾರ ಆಯ್ಕೆ ಆಗಿದ್ದಾರೆ. ನವೆಂಬರ್ 28 ರಂದು ಕಾಶಿ ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ..


