ಬೆಳಗಾವಿ : ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಗುರುವಾರ ಡಿ. 11 ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕನ್ನಡ ಸಂಘಟನೆಗಳ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ.
ಪ್ರಾಧಿಕಾರದ ಸದಸ್ಯ ಅಶೋಕ ಚಂದರಗಿ ಹಾಗೂ ಕಾರ್ಯದರ್ಶಿಮತ್ತೀಹಳ್ಳಿ ಪ್ರಕಾಶ ಅವರು ಸಹ
ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.
ಈ ಸಭೆಗೆ ಕನ್ನಡ ಸಂಘಟನೆಗಳ
ಪದಾಧಿಕಾರಿಗಳು, ಕಾರ್ಯಕರ್ತರು ಆಗಮಿಸಬೇಕೆಂದು
ಕಾರ್ಯದರ್ಶಿಗಳು ಕೋರಿದ್ದಾರೆ.


