ಬೆಂಗಳೂರು: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಭೆ ರಾಜ್ಯ ಸರಕಾರಿ ನೌಕರರ ಸಂಘದ ಸಭಾ
ಭವನದಲ್ಲಿ ರಾಜ್ಯ ಅಧ್ಯಕ್ಷ ಬಿ. ಸಿದ್ದಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ರಾಜ್ಯದ 32 ಜಿಲ್ಲೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದು, ಸಂಘಟನೆ ಬೆಳಿಸುವ ಉದ್ದೇಶ ಹಾಗೂ ಶಿಕ್ಷಕರ ಸಮಸ್ಯೆಗಳ ಕುರಿತು ವಿಸ್ತ್ರ ತವಾಗಿ ಚರ್ಚಿಸಲಾಯಿತು.
ಬೆಳಗಾವಿ ಜಿಲ್ಲೆಯ ಹಿರಿಯ ಸಂಘಟಕ ಅಶೋಕ ಅಣ್ಣಿಗೇರಿ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಪ್ರಮಾಣ ಪತ್ರ ವಿತರಿಸಿ ಸನ್ಮಾನಿಸಲಾಯಿತು. ಜೊತೆಗೆ ಸಂಘಟನೆಯಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿ ಜಿಲ್ಲೆಯ ತಾಲ್ಲೂಕಿನ ಸಂಘದ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಿದ ಡಾ.ಶೇಖರ ಹಲಸಗಿ ಅವರನ್ನು ಕಿತ್ತೂರು ಚನ್ನಮ್ಮ ತಾಲ್ಲೂಕಿನ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಯುಕ್ತ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಸಂಘಕ್ಕೆ ಶ್ರಮವಹಿಸಿದ ಮರಿಕಟ್ಟಿ ಪ್ರೌಢ ಶಾಲೆಯ ಸಹ ಶಿಕ್ಷಕ ಬಸವರಾಜ ಗಾಣಿಗೇರ ಅವರನ್ನು ಬೆಳಗಾವಿ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ರಾಜ್ಯ ಕಾರ್ಯಕಾರಿಣಿಯಲ್ಲಿ ರಾಜ್ಯಅಧ್ಯಕ್ಷರು ಸನ್ಮಾನಿಸಿದರು.
ಇನ್ನು ಮುಂದೆ ಬೆಳಗಾವಿ ಜಿಲ್ಲೆಯಲ್ಲಿ ಉತ್ತಮವಾದ ಸಂಘಟನೆ ಮಾಡಿ ಶಿಕ್ಷಕರ ಸಮಸ್ಯೆ ಗಳಿಗೆ ಸ್ಪಂದಿಸುತ್ತ ಸಂಘವನ್ನು ಬಲಪಡಿಸುವಂತೆ ಸೂಚಿಸಿ ಆದೇಶಿಸಲಾಯಿತು.


