ಬೆಂಗಳೂರು: ರಾಜ್ಯದಲ್ಲಿ ಶೀತ ಗಾಳಿ ಹಾಗೂ ಮೋಡಕವಿದ ವಾತಾವರಣದಿಂದ ತಾಪಮಾನ ಕುಸಿತವಾಗಿ ಚಳಿ ಹೆಚ್ಚಾಗುತ್ತಿದೆ. ಸೋಮವಾರ ರಾಜ್ಯದ ವಿವಿಧೆಡೆ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಒಳನಾಡಿನ ಕೆಲ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 7.6 ಡಿಗ್ರಿ ಸೆಲ್ಸಿಯಸ್ ವರೆಗೂ ಕುಸಿತವಾಗಿದೆ.


