ಧರ್ಮಸ್ಥಳ : ಹೊಸವರ್ಷ ಆರಂಭದ ಮುನ್ನಾದಿ ಬುಧವಾರ, ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಿಂದ ಸಿಂಗರಿಸಿದರು. ಹಳದಿ ಸೇವಂತಿಗೆ, ಬಿಳಿ ಸೇವಂತಿಗೆ, ಕೆಂಪು ಸೇವಂತಿಗೆ, ಗುಲಾಬಿ ಬಟನ್, ರೋಸ್ ಪೆಟಲ್ಸ್, ಸುಗಂಧರಾಜ ಮೊದಲಾದ ಹೂವುಗಳು ಹಾಗೂ ಸೇಬು, ಮೂಸುಂಬಿ ಮತ್ತು ಕಿತ್ತಳೆ ಮೊದಲಾದ ಹಣ್ಣುಗಳು, ವಿವಿಧ ಜಾತಿಯ ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಲ್ಲಿ ಅಲಂಕಾರ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ 150 ಮಂದಿ ಸ್ವಯಂಸೇವಕರಾಗಿ ಅಲಂಕಾರ ಸೇವೆ ಮಾಡಿದರು.


