ಬೆಳಗಾವಿ : ತ್ಯಾಗವೀರ ಸಿರಸಂಗಿ ಲಿಂಗರಾಜರ 165 ನೇ ಜಯಂತಿ ಉತ್ಸವ ಕೆಎಲ್ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಕೇಂದ್ರ ಸಭಾಗೃಹದಲ್ಲಿ ಜ.10 ರಂದು ಬೆಳಿಗ್ಗೆ 11.00 ಗಂಟೆಗೆ ನಡೆಯಲಿದೆ.
ದಿವ್ಯ ಸಾನ್ನಿಧ್ಯವನ್ನು ಶೇಗುಣಸಿ ವಿರಕ್ತಮಠದ ಪರಮಪೂಜ್ಯ ಶ್ರೀ ಮಹಾಂತಪ್ರಭು ಸ್ವಾಮೀಜಿ ವಹಿಸಲಿದ್ದಾರೆ. ಯಲ್ಲಾಪುರ ವಿಶ್ವದರ್ಶನ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ.ಡಿ.ಕೆ.ಗಾಂವಕರ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ವಹಿಸಲಿದ್ದಾರೆ. ಬೆಳಿಗ್ಗೆ ಲಿಂಗರಾಜ ಕಾಲೇಜಿನಲ್ಲಿ ಕೆಎಲ್ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ರಕ್ತಭಂಡಾರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಜರುಗಲಿದೆ ಎಂದು ಸಮಿತಿಯ ಅಧ್ಯಕ್ಷ ಹಾಗೂ ಕೆಎಲ್ಇ ಸಂಸ್ಥೆಯ ಉಪಾಧ್ಯಕ್ಷ ಬಸವರಾಜ ತಟವಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


