ಮೈಸೂರು : ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿಯಲ್ಲಿ ಫೆಬ್ರುವರಿ 13 ರಂದು ಸರ್ಕಾರದ ಸಾಧನೆಗಳ ಸಮಾವೇಶ ನಡೆಸಲು ಯೋಜಿಸಿದ್ದೇವೆ ಎಂದರು.
ವಿಶೇಷ ಅಧಿವೇಶನ ನಡೆಸುವ ಬಗ್ಗೆ ಬುಧವಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದು, ಅಲ್ಲಿ ಚರ್ಚಿಸುತ್ತೇವೆ ಎಂದು ಮಾಹಿತಿ ನೀಡಿದರು.
ಎಚ್.ಡಿ. ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಅವರು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದು, ಈಗ ಕ್ರಿಯಾಶೀಲ ಆಗಿದ್ದಾರೆ. ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೋ, ಇಲ್ಲವೋ ನಮಗೆ ಗೊತ್ತಿಲ್ಲ. ಅದೆಲ್ಲವನ್ನೂ ಮಾಧ್ಯಮಗಳೇ ಹೇಳಬೇಕು ಎಂದರು.
ರಾಹುಲ್ ಗಾಂಧಿ ಅವರು ಗೂಡೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದು, ಅವರನ್ನು ನಾವೆಲ್ಲ ಇಲ್ಲಿನ ವಿಮಾನನಿಲ್ದಾಣದಲ್ಲಿ ಭೇಟಿಯಾಗಿದ್ದೇವೆ. ಆದರೆ ಯಾವುದೇ ಮಾತುಕತೆ ನಡೆದಿಲ್ಲ ಎಂದರು.
ರಾಜ್ಯ ಸರ್ಕಾರದಲ್ಲಿ ಈಗಲೂ ಯಾವುದೇ ಗೊಂದಲ ಇಲ್ಲ. ಅದೆಲ್ಲ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದರು.


