ಬೆಳಗಾವಿ: ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ಎರಡು ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿದೆ. ಸದಾಶಿವ ಭಜಂತ್ರಿ ಎಂಬವರ ಮನೆ ಮೇಲೆ ಕಲ್ಲುತೂರಾಟ ನಡೆದಿದೆ. ಮನೆಯಲ್ಲಿ ಇದ್ದ ವಸ್ತುಗಳು ಪುಡಿಪುಡಿ ಮಾಡಲಾಗಿದೆ. ಮಹಿಳೆ ಎನ್ನುವುದನ್ನು ಲೆಕ್ಕಿಸದೆ ಅವಾಚ್ಯವಾಗಿ ನಿಂದಿಸಲಾಗಿದೆ. ಕಲ್ಲು ತೂರಾಟದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಎಸ್ ಪಿ ಕೆ.ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ದೇಶನೂರ ಗ್ರಾಮ ಬೂದಿ ಮುಚ್ಚಿದ ಕೆಂಡದಂತಿದೆ. ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.


