ಅಥಣಿ: ಪಟ್ಟಣದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಪ್ರೀತಿ, ಪ್ರೇಮದ ಹುಚ್ಚು ಹಿಡಿಸಿದ ಅದೇ ಕಾಲೇಜಿನ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಯುವತಿಯ ತಂದೆ ಅಥಣಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾಗವಾಡ ತಾಲೂಕಿನ ಉಗಾರ ಗ್ರಾಮದ ಪವನಕುಮಾರ ಶೀಲಗಾರ(28) ಎಂಬ ಅವಿವಾಹಿತ ಉಪನ್ಯಾಸಕ ಅದೇ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಕಳೆದ ಜ. 8 ರಂದು ಅಪಹರಿಸಿಕೊಂಡು ಎಸ್ಕೇಪ್ ಆಗಿದ್ದ ಬಗ್ಗೆ ಅಥಣಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಪೊಷಕರು ದೂರು ದಾಖಲು ಮಾಡಿದ್ದಾರೆ, 10 ದಿನಗಳು ಕಳೆದರೂ ಇನ್ನೂ ಇವರು ಮರಳಿ ಊರಿಗೆ ಬಂದಿಲ್ಲ, ಪೊಲೀಸರು ಶೋಧನಾ ಕಾರ್ಯದಲ್ಲಿ ತೊಡಗಿದ್ದು, ಇಬ್ಬರ ಮೊಬೈಲ್ಗಳು ಸ್ವಿಚ್ ಆಫ್ ಆಗಿವೆ,ವಿದ್ಯಾರ್ಥಿನಿಯರ ಪಾಲಕರು ದಿನನಿತ್ಯ ಮಗಳ ಬರುವಿಕೆಗಾಗಿ ಕಣ್ಣೀರು ಹಾಕುತ್ತಿದ್ದಾರೆ.
ಅಥಣಿ ಸಿಪಿಐ ಸಂತೋಷ ಹಳ್ಳೂರು ಹಾಗೂ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದು ಉಪನ್ಯಾಸಕ ಹಾಗೂ ವಿದ್ಯಾರ್ಥಿನಿಯ ಪತ್ತೆಗೆ ಮುಂದಾಗಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ.


