ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಮಯೂರ ಅಮಸಿದ್ದ ಒಡೆಯರ ಅವರು ಅರ್ಥಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ ಕರ್ನಾಟಕ ಕಬ್ಬು ಬೆಳೆಗಾರರ ಸಮಸ್ಯೆಗಳು ಮತ್ತು ಬೆಳವಣಿಗೆ : ಬೆಳಗಾವಿ ಜಿಲ್ಲೆಯ ಒಂದು ವಿಶೇಷ ಅಧ್ಯಯನ ಎಂಬ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ. ಇವರಿಗೆ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಅರ್ಜುನ ಜಂಬಗಿ ಮಾರ್ಗದರ್ಶನ ಮಾಡಿದರು.
ಪ್ರಸ್ತುತ ಮಯೂರ ಅಮಸಿದ್ದ ಒಡೆಯರ ಅವರು ಸಹಾಯಕ ಪ್ರಾಧ್ಯಾಪಕರಾಗಿ ಶ್ರೀ ಭಗವಾನ್ ಮಹಾವೀರ್ ಜೈನ್ ಪ್ರಥಮ ದರ್ಜೆ ಮಹಾವಿದ್ಯಾಲಯ, ಕೆ. ಜಿ. ಎಫ್. ಕೋಲಾರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.


