ದೆಹಲಿ : ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ ಅವರಿಗೆ ಈ ಸಲದ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಅವರು ಸಲ್ಲಿಸಿದ ಅನುಪಮ ಕೊಡುಗೆ ಗಮನಿಸಿ ಈ ಪ್ರಶಸ್ತಿ ಪ್ರಕಟಿಸಲಾಗಿದೆ.
ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದ ಸಾಧನೆಗೆ
ಡಾ. ಪ್ರಭಾಕರ ಕೋರೆಯವರಿಗೆ ಪದ್ಮಶ್ರೀ ಪ್ರಶಸ್ತಿ
ನವದೆಹಲಿ: ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮ ಅದ್ವಿತೀಯ ಸೇವೆ ಹಾಗೂ ದೂರದೃಷ್ಟಿಯ ನಾಯಕತ್ವದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ. ಪ್ರಭಾಕರ ಕೋರೆಯವರಿಗೆ ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.
ಡಾ. ಪ್ರಭಾಕರ ಕೋರೆ ಅವರು ಶಿಕ್ಷಣವನ್ನು ಸಾಮಾಜಿಕ ಪರಿವರ್ತನೆಯ ಶಕ್ತಿಶಾಲಿ ಸಾಧನವೆಂದು ನಂಬಿ, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಕೆಎಲ್ಇ ಸಂಸ್ಥೆಯ ಮೂಲಕ ವೈದ್ಯಕೀಯ, ತಾಂತ್ರಿಕ, ಇಂಜಿನಿಯರಿಂಗ್ ಹಾಗೂ ಸಾಮಾನ್ಯ ಶಿಕ್ಷಣ ಕ್ಷೇತ್ರಗಳಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ಬೆಳಕು ನೀಡಿದ್ದಾರೆ.
ಶಿಕ್ಷಣದ ಜೊತೆಗೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉತ್ತೇಜನಕ್ಕೂ ಅವರು ವಿಶೇಷ ಕೊಡುಗೆ ನೀಡಿದ್ದಾರೆ. ಮೌಲ್ಯಾಧಾರಿತ ಶಿಕ್ಷಣ, ಸಂಸ್ಕೃತಿ ಮತ್ತು ಮಾನವೀಯತೆಯ ಮಹತ್ವವನ್ನು ಯುವಪೀಳಿಗೆಗೆ ತಿಳಿಸುವಲ್ಲಿ ಅವರ ಪಾತ್ರ ಶ್ಲಾಘನೀಯವಾಗಿದೆ. ಶಿಕ್ಷಣ ಕೇವಲ ಉದ್ಯೋಗಕ್ಕೆ ಸೀಮಿತವಾಗದೆ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂಬ ಅವರ ಚಿಂತನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಡಾ. ಪ್ರಭಾಕರ ಕೋರೆಯವರ ಈ ಸಾಧನೆಯನ್ನು ಗುರುತಿಸಿ ನೀಡಲಾದ ಪದ್ಮಶ್ರೀ ಪ್ರಶಸ್ತಿ ಅವರ ಸೇವೆಗೆ ಸಂದ ಗೌರವವಾಗಿದ್ದು, ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಗಣ್ಯರು ಕೆಎಲ್ಇ ಸಂಸ್ಥೆಯ ಸಮಸ್ತ ಪರಿವಾರ, ಗಣ್ಯರು ಅಭಿನಂದಿಸಿದ್ದಾರೆ.
ಡಾ.ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ


