ಬೆಳಗಾವಿ: ಕೆಎಲ್ಇ ಸಂಸ್ಥೆಯ ಜಿಎ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ 77 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಪ್ರಭಾರಿ ಪ್ರಾಚಾರ್ಯ ಡಿ.ಎಸ್. ಪವಾರ, ಕೆಎಲ್ಇ ಸಂಸ್ಥೆಯ ಆಜೀವ ಸದಸ್ಯ ಎಂ.ಎಸ್. ಬಳಿಗಾರ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಪ್ರಭಾರಿ ಉಪ ಪ್ರಾಚಾರ್ಯ ಸಿ.ಪಿ. ದೇವರುಷಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಸಂವಿಧಾನ ಜಗತ್ತಿನಲ್ಲೇ ಅತ್ಯಂತ ದೊಡ್ಡ ಸಂವಿಧಾನ ಎಂಬ ಹಿರಿಮೆಗೆ ಪಾತ್ರವಾಗಿದೆ. 77 ವರ್ಷಗಳು ಕಳೆದರೂ ನಮ್ಮ ಸಂವಿಧಾನಕ್ಕೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಭವಿಷ್ಯದ ದೃಷ್ಟಿಯಿಂದ ನಮ್ಮ ಸಂವಿಧಾನ ಅತ್ಯಂತ ಯಶಸ್ವಿ ಸಂವಿಧಾನ ಯಾವುದರಲ್ಲಿ ಯಾವ ಸಂದೇಹ ಇಲ್ಲ ಎಂದರು.
ಶಿಕ್ಷಕ ಶಿವರಾಯಪ್ಪ ಏಳುಕೋಟಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಪ್ರಭಾಕರ ಕೋರೆ ಅವರ ಕುರಿತು ಕವನ ವಾಚಿಸಿದರು.
ವಿದ್ಯಾರ್ಥಿಗಳಾದ ಸ್ನೇಹಾ ಪಾಟೀಲ, ಶೀತಲ ಕುರುಬರ, ದರ್ಶಿನಿ ಪಾಟೀಲ, ಸೃಷ್ಟಿ ಉಪರಿ, ರಂಜಿತಾ ಪಾಟೀಲ, ಲಕ್ಷ್ಮಿ ಪೂಜಾರಿ ಭಾಷಣ ಮಾಡಿದರು. ಶಿಕ್ಷಕ ಎಂ.ಆರ್. ಹಿರೇಮಠ ಗಣರಾಜ್ಯೋತ್ಸವದ ಕುರಿತು ಮಾತನಾಡಿದರು. ಎಂಟನೇ ತರಗತಿ ವಿದ್ಯಾರ್ಥಿನಿಯರು ದೇಶಭಕ್ತಿ ಗೀತೆ ಹಾಡಿದರು. ಶಿಕ್ಷಕಿ ವಿ.ಐ.ಅಂಗಡಿ ಸ್ವಾಗತಿಸಿದರು. ಶೋಭಿತಾ ವಿರೂಪಾಕ್ಷಿ ವಂದಿಸಿದರು. ಶಿಕ್ಷಕಿ ಎಸ್.ಎ.ಹೊಸಟ್ಟಿ ನಿರೂಪಿಸಿದರು. ಎನ್ ಸಿ ಸಿ, ಸ್ಕೌಟ್ಸ್ ಗೈಡ್ಸ್ ತಂಡಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಚಾಕಚಕ್ಯತೆಯನ್ನು ಪ್ರದರ್ಶಿಸಿದರು.
ಬೆಳಗಾವಿ ಜಿಎ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗಣರಾಜ್ಯೋತ್ಸವ


