ಬೆಳಗಾವಿ: ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮದ ಪ್ರಕಾರ ಜಿಲ್ಲೆಯ ಡಿಸಿಸಿ ಬ್ಯಾಂಕ್ ಇದರ ಆಡಳಿತ ಮಂಡಳಿಗೆ ಮೂವರನ್ನು ಅಧಿಕಾರೇತರ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಬಾಳೇಶ ದಾಸನಟ್ಟಿ, ಸುನೀತಾ ಸೋಮಲಿಂಗ ಐಹೊಳೆ, ಸುರೇಶ ಬಸಪ್ಪ ಇಟಗಿ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಹಾಗೂ ಸರಕಾರದ ಮುಂದಿನ ಆದೇಶದವರೆಗೆ ನಾಮ ನಿರ್ದೇಶನ ಮಾಡಿ ಆದೇಶಿಸಿದೆ ಎಂದು ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಸರ್ಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿ ಎ ಸಿ ದಿವಾಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


